Skip to content

NEE HEENGA NODABEDA

Popularity · Low

Listen

YouTube

0:00 / 0:00
Loading YouTube player...
Lyrics offset
Synced

Lyrics

ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ ||ಪ|| ಧಾರೀಲೆ ನೆನೆದ ಕೈಹಿಡಿದೆ ನೀನು ತಣ್ಣsಗ ಅಂತನ ತಿಳಿದು ಬಿಡವೊಲ್ಲಿ ಇನ್ನೂನೂ ಬೂದಿ ಮುಚ್ಚಿದ ಕೆಂಡ ಇದಂತ ಹೊಳೆದು ಮುಗಿಲನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲ ಎಲ್ಲನ್ನs ಆ ಗಾದಿಮಾತು ನಂಬಿ, ನಾನು ದೇವರಂತ ತಿಳಿದೆಯೇನ ನೀ ನನ್ನ ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ ಇಬ್ಬನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು ಹೊಳೆ ಹೊಳೆವ ಹಾಂಗ ಕಣ್ಣಿರುವ, ಹೆಣ್ಣ, ಹೇಳು ನಿನ್ನವೇನ ಈ ಕಣ್ಣು? ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲs ಹುಣ್ಣಿಮಿ ಚಂದಿರನ ಹೆಣಾ ಬಂತೋ ಮುಗಿಲಾಗ ತೇಲತಾ ಹಗಲ! ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ ||ಪ|| ನಿನ್ನ ಕಣ್ಣಿನಾಗ ಕಾಲೂರಿ ಮಳೆಯು, ನಡನಡಕ ಹುಚ್ಚು ನಗಿ ಯಾಕ ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ, ಅತ್ತರೆ ಅತ್ತು ಬಿಡು, ಹೊನಲು ಬರಲಿ, ನಕ್ಯಾಕ ಮರಸತಿ ದುಕ್ಕ? ಎಲೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿ ಕಚ್ಚಿ ಹಿಡಿಯದಿರು ಬಿಕ್ಕ. ನೀ ಹಿಂಗ ನೋಡಬ್ಯಾಡ ನನ್ನ, ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ